![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/kn/thumb/6/60/HampiKannadaUniversity.jpg/640px-HampiKannadaUniversity.jpg&w=640&q=50)
ಕನ್ನಡ ವಿಶ್ವವಿದ್ಯಾಲಯ
From Wikipedia, the free encyclopedia
ಕನ್ನಡ ವಿಶ್ವವಿದ್ಯಾಲಯ : ಕನ್ನಡ ನಾಡು, ನುಡಿ, ಸಂಸ್ಕೃತಿಗಳ ವಿಶೇಷ ಅಧ್ಯಯನಕ್ಕಾಗಿ 1991ರಲ್ಲಿ ಸ್ಥಾಪಿತವಾದ ಒಂದು ವಿಶ್ವವಿದ್ಯಾಲಯ.[1] ಕನ್ನಡದ ಕೆಲಸಗಳು ವಿವಿಧ ವಿಶ್ವವಿದ್ಯಾಲಯಗಳ ಕನ್ನಡ ಅಧ್ಯಯನ ಕೇಂದ್ರಗಳು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಅಕಾಡೆಮಿಗಳ ಮೂಲಕ ನಡೆಯುತ್ತಿದ್ದರೂ ಕನ್ನಡ ನಾಡುನುಡಿಯ ಬಗ್ಗೆ, ಕನ್ನಡ ಭಾಷಾ ಪುರೋಬಿsವೃದ್ಧಿಯ ಬಗ್ಗೆ ಆಳವಾದ ಕೆಲಸ ಕಾರ್ಯಗಳು ನಡೆಯಬೇಕೆಂಬ ಮಹೋದ್ದೇಶದಿಂದ ಕರ್ನಾಟಕ ಸರ್ಕಾರ ಈ ವಿಶ್ವವಿದ್ಯಾಲಯವನ್ನು ಅಸ್ತಿತ್ವಕ್ಕೆ ತಂದಿತು. ವಿಜಯನಗರ ಜಿಲ್ಲೆಯ (ಆಗ ಬಳ್ಳಾರಿ ಜಿಲ್ಲೆ) ಚಾರಿತ್ರಿಕ ಮಹತ್ತ್ವವುಳ್ಳ ಹಂಪೆಯ ಪರಿಸರದಲ್ಲಿ ಈ ವಿಶ್ವವಿದ್ಯಾಲಯ ನೆಲೆಗೊಂಡಿದೆ. ಹಂಪಿಯ ಹೊರವಲಯದಲ್ಲಿರುವ ಈ ವಿಶ್ವವಿದ್ಯಾಲಯದ ಆವರಣಕ್ಕೆ ವಿದ್ಯಾರಣ್ಯವೆಂದು ಹೆಸರಿದೆ. ವಿಜಯನಗರ ಕಾಲದ ವಿಶಿಷ್ಟ ವಾಸ್ತುಶೈಲಿಯಲ್ಲಿ ಕಟ್ಟಡಗಳನ್ನು ರೂಪಿಸಲಾಗಿದೆ.
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
Quick Facts ಕನ್ನಡ ವಿಶ್ವವಿದ್ಯಾಲಯ, ಸ್ಥಾಪನೆ ...
ಕನ್ನಡ ವಿಶ್ವವಿದ್ಯಾಲಯ | |
---|---|
![]() ಕನ್ನಡ ವಿಶ್ವವಿದ್ಯಾಲಯ | |
ಸ್ಥಾಪನೆ | ೧೯೯೧ |
ಪ್ರಕಾರ | ಸಾರ್ವಜನಿಕ |
ಉಪಕುಲಪತಿಗಳು | ಪ್ರೊ.ಡಿ.ವಿ.ಪರಮಶಿವಮೂರ್ತಿ |
ಸಿಬ್ಬಂದಿ | '-' |
ವಿದ್ಯಾರ್ಥಿಗಳ ಸಂಖ್ಯೆ | '-' |
ಪದವಿ ಶಿಕ್ಷಣ | '-' |
ಸ್ನಾತಕೋತ್ತರ ಶಿಕ್ಷಣ | '-' |
ಡಾಕ್ಟರೇಟ್ ಪದವಿ | '-' |
ಇತರೆ | '-' |
ಆವರಣ | ಗ್ರಾಮಾಂತರ |
'ಮಾತೆಂಬುದು ಜ್ಯೋತಿರ್ಲಿಂಗ' |
Close