ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರ ಪಟ್ಟಿ / From Wikipedia, the free encyclopedia
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಗಳಿಗೆ ಭಾಜನರಾದ ಕನ್ನಡ ಸಾಹಿತ್ಯ ಲೋಕದ ದಿಗ್ಗಜರ ಪಟ್ಟಿ ಈ ಕೆಳಗಿನಂತಿದೆ.