ತ್ರ್ಯಂಬಕೇಶ್ವರ
From Wikipedia, the free encyclopedia
ತ್ರ್ಯಂಬಕೇಶ್ವರವು ( ಮರಾಠಿಯಲ್ಲಿ ತ್ರಿಂಬಕೇಶ್ವರ್ ) ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ತ್ರಿಂಬಕ್ ಪಟ್ಟಣದಲ್ಲಿನ ಒಂದು ಪ್ರಾಚೀನ ಹಿಂದೂ ದೇವಾಲಯ. ಇದು ನಾಶಿಕ್ ನಗರದಿಂದ ೨೮ ಕಿ.ಮೀ. ದೂರದಲ್ಲಿ ಗೋದಾವರಿ ನದಿಯ ಉಗಮಸ್ಥಾನದ ಬಳಿಯಲ್ಲಿದೆ. ಶಿವದೇವಾಲಯವಿರುವ ಈ ಕ್ಷೇತ್ರವು ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದು. ಸಮೀಪದಲ್ಲಿನ ಬ್ರಹ್ಮಗಿರಿ ಬೆಟ್ಟದಸಾಲಿನಲ್ಲಿ ಉದ್ಬವಿಸುವ ಗೋದಾವರಿ ನದಿಯು ಭಾರತ ಜಂಬೂದ್ವೀಪದ ಅತಿ ಉದ್ದದ ನದಿಯಾಗಿದೆ. ತ್ರ್ಯಂಬಕೇಶ್ವರದ ಕುಶಾವರ್ತ ಎಂಬ ಕುಂಡದಿಂದ ಮುಂದೆ ಗೋದಾವರಿಯ ಹರಿವು ಸ್ಪಷ್ಟವಾಗುವುದರಿಂದ ಈ ಸ್ಥಾನವನ್ನು ಹಿಂದೂ ಶ್ರದ್ಧಾಳುಗಳು ಪವಿತ್ರವೆಂದು ಭಾವಿಸಿ ಪುಣ್ಯಸ್ನಾನ ಕೈಗೊಳ್ಳುವರು. ತ್ರ್ಯಂಬಕೇಶ್ವರದದ ವೈಶಿಷ್ಟ್ಯವೆಂದರೆ ಇಲ್ಲಿನ ಜ್ಯೋತಿರ್ಲಿಂಗವು ಮೂರು ಮುಖಗಳನ್ನು ಹೊಂದಿದ್ದು ಈ ಮುಖಗಳು ಬ್ರಹ್ಮ, ವಿಷ್ಣು ಮತ್ತು ಶಿವನ ಪ್ರತೀಕವಾಗಿವೆ. ಭಾರತದ ಉಳಿದ ಹನ್ನೊಂದು ಜ್ಯೋತಿರ್ಲಿಂಗಗಳೆಲ್ಲವೂ ಶಿವಪ್ರಧಾನವಾಗಿವೆ. ಬ್ರಹ್ಮಗಿರಿ ಬೆಟ್ಟಗಳ ತಪ್ಪಲಿನಲ್ಲಿರುವ ತ್ರ್ಯಂಬಕೇಶ್ವರ ದೇವಾಲಯವು ಕರಿಕಲ್ಲಿನಿಂದ ಕಟ್ಟಲ್ಪಟ್ಟಿದ್ದು ಸುಂದರ ವಾಸ್ತುಶಿಲ್ಪಕ್ಕೆ ಹೆಸರಾಗಿದೆ. ಇಲ್ಲಿಂದ ೭ ಕಿ.ಮೀ. ದೂರದಲ್ಲಿರುವ ಅಂಜನೇರಿ ಪರ್ವತವು ಹನುಮಂತನ ಜನ್ಮಸ್ಥಾನವೆಂದು ಹೇಳಲ್ಪಡುವುದು.
ತ್ರ್ಯಂಬಕೇಶ್ವರ ಮಂದಿರ | |
---|---|
ಹೆಸರು: | ತ್ರ್ಯಂಬಕೇಶ್ವರ ಮಂದಿರ |
ಪ್ರಮುಖ ದೇವತೆ: | ಶಿವ |
ವಾಸ್ತುಶಿಲ್ಪ: | ಮೇಮದಪಂದಿ |