From Wikipedia, the free encyclopedia
ದಶಾವತಾರ ಜಾಗತಿಕ ಸಂರಕ್ಷಣೆಯ ಹಿಂದೂ ದೇವರಾದ ವಿಷ್ಣುವಿನ ಹತ್ತು ಅವತಾರಗಳನ್ನು ಸೂಚಿಸುತ್ತದೆ. ಅವತಾರ ಎಂದರೆ ಇಳಿದುಬರುವುದು ಎಂದರ್ಥ. ಇದು ಭಗವಂತ ಜೀವಕೋಟಿಯ ಉದ್ಧಾರಕ್ಕೆ ಕೈಕೊಳ್ಳುವ ಒಂದು ಕ್ರಿಯೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಹಾಗು ಅರ್ಹರನ್ನು ಅಥವಾ ಭಕ್ತರನ್ನು ಹುಟ್ಟು ಮತ್ತು ಸಾವುಗಳ ಚಕ್ರದಿಂದ ಮುಕ್ತಗೊಳಿಸಲು ಸುಜನರನ್ನು ಎತ್ತಿಹಿಡಿದು ದುರ್ಜನರನ್ನು ದಮನಗೊಳಿಸುವುದರ ಮೂಲಕ ಧರ್ಮಸಂಸ್ಥಾಪನೆಗೆ ಪರಮಾತ್ಮ ಕಾಲಕಾಲಕ್ಕೆ ಯಾವುದೋ ಒಂದು ರೂಪದಲ್ಲಿ ಭೂಮಿಗೆ ಇಳಿದುಬರುತ್ತೇನೆ ಎಂದು ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವ ಮಾತು ಅವತಾರ ಎನ್ನುವುದರ ಉದ್ದೇಶವನ್ನು ಸೂಚಿಸುತ್ತದೆ.
ಈ ಅವತಾರಗಳ ಸಂಖ್ಯೆಯ ವಿಚಾರದಲ್ಲಿ ಒಮ್ಮತವಿಲ್ಲ. ಅಲ್ಲದೆ ಅವತಾರಗಳು ವಿಷ್ಣುವಿಗೇ ಮೀಸಲಾದವಲ್ಲ. ಶಿವನೂ ಅವತಾರ ಮಾಡಿದ್ದಾನೆ ಎಂಬುದನ್ನೂ ಮರೆಯುವಂತಿಲ್ಲ. ಮಹೇಶ್ವರ ಇಪ್ಪತ್ತೆಂಟು ಅವತಾರಗಳನ್ನು ಎತ್ತಿದ್ದಾನೆ ಎಂದು ವಾಯು ಪುರಾಣ ಹೇಳುತ್ತದೆ.
ಹಿಂದೂ ಸಂಪ್ರದಾಯ ವಿಷ್ಣುವಿನ ಅವತಾರಗಳ ಸಂಖ್ಯೆ ಹತ್ತು ಎಂದು ನಂಬಿದೆ. ಹಿಂದೆ ಸಹಸ್ರಾರು ಆಗಿದ್ದವೆಂದೂ ಭವಿಷ್ಯದಲ್ಲಿ ಅನೇಕ ಸಹಸ್ರ ಅವತಾರಗಳು ಆಗುತ್ತವೆ ಎಂದೂ ಹರಿವಂಶದಲ್ಲಿ ಹೇಳಿದೆ. ಪೂರ್ವಮೀಮಾಂಸಾಚಾರ್ಯರಾದ ಕುಮಾರಿಲ ಭಟ್ಟರು ದಶಾವತಾರಗಳಲ್ಲೊಂದಾದ ಬುದ್ಧಾವತಾರವನ್ನು ವಿಷ್ಣುವಿನದೆಂಬುದನ್ನು ಒಪ್ಪುವುದಿಲ್ಲ.
'ದಶವತಾರ' ಎಂದರೆ 'ಹತ್ತು ಅವತಾರಗಳು ':
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.