From Wikipedia, the free encyclopedia
ಘೋರ ದಾಳಿಗೆ ಭಾರತ ಕಠಿಣ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನೇರವಾಗಿ ಪಾಕಿಸ್ತಾನದತ್ತಲೇ ಬೆರಳು ತೋರಿದ್ದಾರೆ. ಪಾಕಿಸ್ತಾನ ಭಯೋತ್ಪಾದಕ ದೇಶ ಎಂದು ಅವರು ಹೇಳಿದ್ದಾರೆ. ಅಂತರರಾಷ್ಟ್ರೀಯ ಸಮುದಾಯ ಈ ದೇಶವನ್ನು ದೂರ ಇರಿಸುವ ಕೆಲಸ ಮಾಡಬೇಕು ಎಂದು ರಾಜನಾಥ್ ಕೋರಿದ್ದಾರೆ. ಬಿಜೆಪಿ ಮುಖಂಡ ರಾಮಮಾಧವ್ ಪ್ರತಿಕ್ರಿಯೆ ನೀಡಿ, ನಮ್ಮ ಸಂಯಮದ ದಿನಗಳು ಮುಗಿದು ಹೋಗಿವೆ. ದಾಳಿಯ ನಂತರ, ‘ನಮ್ಮ ಒಂದು ಹಲ್ಲು ಹೋದರೆ ಅವರ ಇಡೀ ದವಡೆಯನ್ನು ಒಡೆದು ಹಾಕುವ’ ನೀತಿ ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಕಳವಳ: ಸೇನಾ ಕಾರ್ಯಾಚರಣೆಯ ಮಹಾ ನಿರ್ದೇಶಕ (ಡಿಜಿಎಂಒ) ಲೆ. ಜ. ರಣಬೀರ್ ಸಿಂಗ್ ಅವರು ಪಾಕಿಸ್ತಾನದ ಡಿಜಿಎಂಒಗೆ ಕರೆ ಮಾಡಿ ದಾಳಿಯ ಬಗ್ಗೆ ತಮ್ಮ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸೇನಾ ಶಿಬಿರದ ಮೇಲೆ ದಾಳಿ ನಡೆಸಿದವರು ಬಳಸಿದ ಶಸ್ತ್ರಗಳಲ್ಲಿ ಪಾಕಿಸ್ತಾನದಲ್ಲಿ ತಯಾರಾಗಿರುವ ಕುರಿತ ಗುರುತುಗಳಿದ್ದವು. ಇದು ಗಂಭೀರ ಕಳವಳದ ವಿಚಾರ ಎಂದು ರಣಬೀರ್ ಸಿಂಗ್ ಹೇಳಿದ್ದಾರೆ. ‘ದಾಳಿ ನಡೆಸಿದ ನಾಲ್ವರು ಉಗ್ರರ ಬಳಿ ಇದ್ದ ಶಸ್ತ್ರಗಳಲ್ಲಿಯೂ ಪಾಕಿಸ್ತಾನದ ಗುರುತು ಇತ್ತು. ಹತ್ಯೆಯಾದ ಎಲ್ಲ ಉಗ್ರರು ಜೈಷ್–ಎ–ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂಬುದು ಆರಂಭಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ರಣಬೀರ್ ಸಿಂಗ್ ತಿಳಿಸಿದ್ದಾರೆ. ಉಗ್ರರು ಬೆಂಕಿ ಉಗುಳುವ ಶಸ್ತ್ರಗಳನ್ನು ಹೊಂದಿದ್ದರು. ಇದರಿಂದಾಗಿ ಸೈನಿಕರು ಮಲಗಿದ್ದ ಟೆಂಟ್ಗಳಿಗೆ ಬೆಂಕಿ ಹತ್ತಿಕೊಂಡಿತು. ಹುತಾತ್ಮರಾದ 17 ಯೋಧರ ಪೈಕಿ 13–14 ಮಂದಿ ಬೆಂಕಿಯಿಂದಾಗಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. [೧] [೨] [೩]
ಉರಿಯಲ್ಲಿ ನಡೆದ ಉಗ್ರರ ದಾಳಿ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಉನ್ನತಮಟ್ಟದ ಸಭೆ ನಡೆಸಿದರು. ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಹಣಕಾಸು ಸಚಿವ ಅರುಣ್ ಜೇಟ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊಬಾಲ್, ಭೂಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.[೪] ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್-ಕಿ-ಮೂನ್
ವರ್ಷ > | 2013 | 2014 | 2015 | 2016 |
---|---|---|---|---|
ಭದ್ರತಾ ಸಿಬ್ಬಂದಿ ಸಾವು > | 61 | 51 | 41 | 64 |
ನಾಗರೀಕರ ಸಾವು > | 100 | 110 | 113 | 116 |
ಇಸ್ಲಾಮಾಬಾದ್ನಿಂದ ಹೇಳಿಕೆ:28 Oct, 2016: ಇಲ್ಲಿಯವರೆ ಜಮ್ಮು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ಭಾಗದಲ್ಲಿ ಕದನ ವಿರಾಮ ಉಲ್ಲಂಘಿಸಿದ 15 ಪಾಕ್ ರೇಂಜರ್ಗಳನ್ನು ಹತ್ಯೆ ಮಾಡಿದ್ದೇವೆ ಎಂಬ ಬಿಎಸ್ಎಫ್ ಹೇಳಿಕೆಗೆ ನಮ್ಮ ಯೋಧರು ಹತ್ಯೆಯಾಗಿಲ್ಲ ಎಂದು ಪಾಕ್ ಸೇನೆ ಪ್ರತಿಕ್ರಿಯಿಸಿದೆ.(ಕದನ ವಿರಾಮ ಉಲ್ಲಂಘಿಸಿದ 15 ಪಾಕ್ ರೇಂಜರ್ಗಳನ್ನು ಹತ್ಯೆ ಮಾಡಿದ್ದೇವೆ: ಬಿಎಸ್ಎಫ್)[೩೪]
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.