Remove ads
From Wikipedia, the free encyclopedia
ಕೂಡಲ ಸಂಗಮ ಗ್ರಾಮವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ಇದೆ. ಆಲಮಟ್ಟಿ ಅಣೆಕಟ್ಟಿನಿಂದ ಸುಮಾರು ೩೫ ಕಿ.ಮಿ.ದೂರದಲ್ಲಿದೆ.
ಕೂಡಲ ಸಂಗಮ | |
ಕೂಡಲಸಂಗಮನಾಥ ದೇವಾಲಯದ ವಿಹಂಗಮ ನೋಟ ಕೂಡಲ ಸಂಗಮ , ಬಾಗಲಕೋಟೆ ಜಿಲ್ಲೆ | |
ರಾಜ್ಯ - ಜಿಲ್ಲೆ |
ಕರ್ನಾಟಕ - ಬಾಗಲಕೋಟೆ |
ನಿರ್ದೇಶಾಂಕಗಳು | |
ವಿಸ್ತಾರ | km² |
ಸಮಯ ವಲಯ | IST (UTC+5:30) |
ಜನಸಂಖ್ಯೆ - ಸಾಂದ್ರತೆ |
- /ಚದರ ಕಿ.ಮಿ. |
ಕೋಡ್ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- ೫೮೭೧೧೫ - +೯೧ (೦) ೮೩೫೧ - ಕೆಎ-೨೯ |
ಅಂತರ್ಜಾಲ ತಾಣ: ಕೂಡಲ ಸಂಗಮ http://www.bagalkot.nic.in/ ಕೂಡಲ ಸಂಗಮ |
ಕೂಡಲ ಸಂಗಮವು ಬಸವಣ್ಣನವರ ಐಕ್ಯ ಸ್ಥಳವಾಗಿದ್ದು, ಲಿಂಗಾಯತ ಪಂಗಡದವರಿಗೆ ಪ್ರಮುಖ ಪುಣ್ಯಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ ಜಾತವೇದ ಮುನಿಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ ಕೃಷ್ಣಾ ನದಿ ಮತ್ತು ಮಲಪ್ರಭಾ ನದಿ ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ ಆಂಧ್ರ ಪ್ರದೇಶ ರಾಜ್ಯದ ಶ್ರೀಶೈಲದ(ಇನ್ನೊಂದು ಪುಣ್ಯ ಕ್ಷೇತ್ರ) ಕಡೆಗೆ ಹರಿಯುತ್ತದೆ. ಕರ್ನಾಟಕ ಸರಕಾರವು ಇದನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಗೊಳಿಸಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರವು ಈ ಪುಣ್ಯಸ್ಥಳದ ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ.
ಗ್ರಾಮವು ಭೌಗೋಳಿಕವಾಗಿ ೧೬* ೩೨ ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧ ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಗ್ರಾಮದಲ್ಲಿ ಜನಸಂಖ್ಯೆ ಸುಮಾರು ೩,೭೦೦ ಇದೆ. ಅದರಲ್ಲಿ ೨೧೦೦ ಪುರುಷರು ಮತ್ತು ೧೬೦೦ ಮಹಿಳೆಯರು ಇದ್ದಾರೆ.
ಮುಖ್ಯ ಭಾಷೆ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆ ಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಶೆಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಹಾಗೂ ಸಿಹಿತಿಂಡಿ ಎಳ್ಳು ಹೋಳಿಗೆ, ಶೆಂಗಾ ಹೋಳಿಗೆ, ಅಲ್ಪಿ (ಕರದಂಟು) ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
ಜೋಳ, ಗೋಧಿ, ಸಜ್ಜೆ, ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.
ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.
ಇಲ್ಲಿನ ಪ್ರಮುಖ ಪ್ರವಾಸ ಸ್ಥಳಗಳು ಇಂತಿವೆ:
ಕೃಷ್ಣಾ ಮತ್ತು ಮಲಪ್ರಭಾ ನದಿ ಸಂಗಮಿಸುವ ಕ್ಡೇತ್ರ., ಕೂಡಲ ಸಂಗಮ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಸುಮಾರು ೩೫ ಕಿ.ಮಿ.ದೂರದಲ್ಲಿದೆ. ಇದು ಬಸವಣ್ಣನವರ ಐಕ್ಯ ಸ್ಥಳವಾಗಿದ್ದು, ಲಿಂಗಾಯತ ಧರ್ಮದ ಪ್ರಮುಖ ಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ ಜಾತವೇದ ಮುನಿಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ ಕೃಷ್ಣ ನದಿ ಮತ್ತು ಮಲಪ್ರಭಾ ನದಿ ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ ಆಂಧ್ರ ಪ್ರದೇಶ ರಾಜ್ಯದ ಶ್ರೀಶೈಲದ (ಇನ್ನೊಂದು ಕ್ಷೇತ್ರ) ಕಡೆಗೆ ಹರಿಯುತ್ತದೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.