Remove ads
ಭಾರತೀಯ ಕವಿ From Wikipedia, the free encyclopedia
ಪ್ರೊ.ಕೆ.ಎಸ್.ನಿಸಾರ್ ಅಹಮದ್(5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಕವಿಯಾಗಿದ್ದರು. ಅವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು.
ಪ್ರೊ. ಕೆ. ಎಸ್. ನಿಸಾರ್ ಅಹಮದ್ | |
---|---|
ಜನನ | ದೇವನಹಳ್ಳಿ, ಮೈಸೂರು ಸಂಸ್ಥಾನ, ಬ್ರಿಟಿಷ್ ಇಂಡಿಯಾ | ೫ ಫೆಬ್ರವರಿ ೧೯೩೬
ಮರಣ | 3 May 2020 84)[೧] ಬೆಂಗಳೂರು, yelahanka | (aged
ವೃತ್ತಿ | ಸಾಹಿತಿ, ಪ್ರಾಧ್ಯಾಪಕ |
ಭಾಷೆ | ಕನ್ನಡ |
ರಾಷ್ಟ್ರೀಯತೆ | ಭಾರತೀಯ |
ಪ್ರಕಾರ/ಶೈಲಿ | ಕಾವ್ಯ ಮತ್ತು ವಿಮರ್ಶೆ |
ಸಾಹಿತ್ಯ ಚಳುವಳಿ | ನವ್ಯ ಕಾವ್ಯ |
ಪ್ರಮುಖ ಕೆಲಸ(ಗಳು) | ಮನಸು ಗಾಂಧಿ ಬಜಾರು(1960) ನಿತ್ಯೋತ್ಸವ |
ಪ್ರಮುಖ ಪ್ರಶಸ್ತಿ(ಗಳು) | ಪದ್ಮಶ್ರೀ (೨೦೦೮), ರಾಜ್ಯೋತ್ಸವ (೧೯೮೧) |
ಪ್ರಭಾವಗಳು
|
ನಿಸಾರ್ ಅಹಮದ್ ಬೆಂಗಳೂರ ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫,೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂರಚನಶಾಸ್ತ್ರ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತರು
ನಿಸಾರ್ ಅಹಮದ್ [೨] ಅವರ ಸಾಹಿತ್ಯಾಸಕ್ತಿ ೧೦ನೇ ವಯಸ್ಸಿನಲ್ಲೇ ಆರಂಭ.'ಜಲಪಾತ'ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ (೨೦೧೮) ೨೧ ಕವನ ಸಂಕಲನಗಳು, ೧೪ ವೈಚಾರಿಕೆ ಕೃತಿಗಳು, ೫ ಮಕ್ಕಳ ಸಾಹಿತ್ಯ ಕೃತಿಗಳು, ೫ ಅನುವಾದ ಕೃತಿಗಳು, ೧೩ ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.