Remove ads
ತುಳು ದ್ರಾವಿಡ ಭಾಷೆಗಳಲ್ಲಿ ಒಂದು, ಕರಾವಳಿ ಕರ್ನಾಟಕದ ಉಡುಪಿ, ಮಂಗಳೂರು, ಮತ್ತು ಕೇರಳದ ಕಾಸರಗೋಡಿನ ಕೆಲ ಪ್ರದೇಶಗ From Wikipedia, the free encyclopedia
ತುಳು(ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಚಾಲ್ತಿಯಲ್ಲಿದೆ. ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ.
)ತುಳು ತುಳು ಭಾಷೆ | ||
---|---|---|
ಬಳಕೆಯಲ್ಲಿರುವ ಪ್ರದೇಶಗಳು: |
ಭಾರತ | |
ಪ್ರದೇಶ: | ತುಳು ನಾಡು:ಪ್ರದೇಶ ಕರ್ನಾಟಕಮತ್ತು ಕೇರಳ ರಾಜ್ಯಗಳು[೧][೨] ಮಹಾರಾಷ್ಟ್ರ[೩] ಗಲ್ಫ್ ದೇಶಗಳು[೪][೫] | |
ಒಟ್ಟು ಮಾತನಾಡುವವರು: |
1.7 ದಶಲಕ್ಷ | |
ಭಾಷಾ ಕುಟುಂಬ: | ದಕ್ಷಿಣ ದ್ರಾವಿಡ ತುಳು ಭಾಷೆ ತುಳು | |
ಬರವಣಿಗೆ: | ತಿಗಳಾರಿ ಲಿಪಿ (ಐತಿಹಾಸಿಕ) ಕನ್ನಡ ಲಿಪಿ (ಸಮಕಾಲೀನ)[೬] | |
ಭಾಷೆಯ ಸಂಕೇತಗಳು | ||
ISO 639-1: | ಯಾವುದೂ ಇಲ್ಲ | |
ISO 639-2: | ಸೇರಿಸಬೇಕು | |
ISO/FDIS 639-3: | tcy | |
Tuluspeakers.PNG
ಟೆಂಪ್ಲೇಟು:Infobox ಭಾಷೆ/ಇಂಡಿಕ್ |
ಸುಮಾರು ೧೦ನೇ ಶತಮಾನದಲ್ಲಿ ತುಳು ಬ್ರಾಹ್ಮಣರು ದಕ್ಷಿಣ ಭಾರತದ ಭಾಗಗಳಲ್ಲಿ ವಿಕಾಸವಾದ ತಿಗಳಾರಿ ಲಿಪಿ ಎಂಬ ಬ್ರಾಹ್ಮಿ ಆಧಾರಿತ ಲಿಪಿಯನ್ನು ಉಪಯೋಗಿಸುತ್ತಿದರು. ತುಳುವ ಪ್ರದೇಶಗಳಲ್ಲಿ ಬಳಕೆಯಲ್ಲಿದ್ದ ಈ ಲಿಪಿಯನ್ನು ತುಳು ಲಿಪಿ ಎಂದು ಕರೆಯಲಾಗಿದೆ. ಈ ಲಿಪಿಯನ್ನು ಸಂಸ್ಕೃತ ದ ಶ್ಲೋಕಗಳನ್ನು ಬರೆದಿಟ್ಟುಕೊಳ್ಳಲು ಬಳಸುತಿದ್ದರು. ಆದರೆ ಅದರ ವ್ಯಾಪಕ ಬಳಕೆ ಇಲ್ಲದಿದ್ದ ಕಾರಣ ಕಾಲಕ್ರಮೇಣ ಲಿಪಿ ಬಳಕೆ ನಶಿಸಿ ಹೋಗಿದೆ. ಇತ್ತಿಚೆನ ದಿನಗಳಲ್ಲಿ ಹಳೆಯ ಈ ಲಿಪಿಯ ಪುನರುಜ್ಜೀವನಕ್ಕಾಗಿ ಹಲವಾರು ಪ್ರಯತ್ನಗಳು ನಡೆದಿವೆ. ಪುರಾತನ ತಿಗಳಾರಿ ಲಿಪಿ ಮಲೆಯಾಳಂ ಲಿಪಿಯನ್ನು ಹೋಲುತ್ತದೆ. ಪ್ರಸ್ತುತ ತುಳುಭಾಷೆಯನ್ನು ಬರೆಯಲು ಕನ್ನಡ ಲಿಪಿಯನ್ನು ಬಳಸುತ್ತಾರೆ.
ತುಳುಭಾಷೆಯಲ್ಲಿ ರಚಿತವಾಗಿರುವ ಕೃತಿಗಳ ಲಭ್ಯತೆ ಕಡಿಮೆ ಇರುವುದರಿಂದ ತುಳು ಭಾಷೆಯ ಪ್ರಾಚೀನತೆಯನ್ನು ಅಂದಾಜು ಮಾಡುವುದು ಕಷ್ಟ. ಆದರೂ ತುಳು ಭಾಷೆಯ ಪ್ರಾಚೀನತೆಯನ್ನು ತುಳುವ ಜನ ಜೀವನದಲ್ಲಿ ಅಡಕವಾಗಿರುವ ವಿಶಿಷ್ಟ ಸಂಸ್ಕೃತಿ ಹಾಗೂ ಪಾಡ್ದನ ಎಂಬ ಜಾನಪದ ಸಾಹಿತ್ಯಗಳಿಂದ ನಿಷ್ಕರ್ಷೆ ಮಾಡಬಹುದು. ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಬಹುಪಾಲು ಜನರು ತುಳು ಭಾಷೆ ಮಾತನಾಡುತ್ತಾರೆ. ಈ ಜಿಲ್ಲೆಗಳನ್ನು ಒಳಗೊಂಡ ಪ್ರದೇಶವನ್ನು ಚಾರಿತ್ರಿಕವಾಗಿ ತುಳುನಾಡು ಎಂದು ಕರೆಯಲಾಗುತ್ತದೆ. ಹಾಗೆಯೇ ಮುಂಬಯಿ ಪಟ್ಟಣ, ಗುಜರಾತ್ ರಾಜ್ಯದ ಕೆಲ ಭಾಗಗಳಲ್ಲಿ ತುಳುವರು ಇದ್ದಾರೆ. ಸುಮಾರು ೨ ದಶಲಕ್ಷ ಜನರು ತುಳು ಭಾಷೆ ಮಾತಾಡುತ್ತಾರೆ.
ತುಳು ಭಾಷೆಯು ದ್ರಾವಿಡ ಭಾಷೆಗಳಲ್ಲಿ ಒಂದಾಗಿದೆ. ಅಲ್ಲದೆ ಭಾರತದ ಪ್ರಾಚೀನ ಭಾಷೆಗಳಲ್ಲೊಂದು ಎಂಬ ಸ್ಥಾನವನ್ನು ಪಡೆದಿದೆ. ತುಳು ಮಾತನಾಡುವ ಪ್ರದೇಶಗಳಲ್ಲಿ ದಕ್ಷಿಣದಿಂದ ಉತ್ತರಕ್ಕೆ ಮಾತನಾಡುವ ಶೈಲಿಯು ಬದಲಾಗುತ್ತದೆ. ಮಾತನಾಡುವ ಶೈಲಿಗೆ ಅನುಸಾರವಾಗಿ ತುಳು ಭಾಷೆಯನ್ನು ಮುಖ್ಯವಾಗಿ ೪ ವಿಧವಾಗಿ ವಿಂಗಡನೆ ಮಾಡಬಹುದು: - ಬ್ರಾಹ್ಮಣ, ಸಾಮಾನ್ಯ, ಜೈನ, ಹಾಗೂ ಬುಡಕಟ್ಟು.
ಮಲಯಾಳಂ ಕೃತಿ ಕೇರಳೊತ್ಪತ್ತಿ , ಸಂಗಮ ಸಾಹಿತ್ಯದ ಕೆಲವು ಹಾಗೂ ತುಳು ಜನಪದ ಪಾಡ್ದನ ಹಾಡುಗಳ ಪ್ರಕಾರ, ಚಾರಿತ್ರಿಕವಾಗಿ ತುಳುನಾಡಿನ ವಿಸ್ತಾರವು ಕಾಸರಗೋಡಿನ ಚಂದ್ರಗಿರಿ ನದಿಯಿಂದ (ಈಗಿನ ಕೇರಳ) ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದವರೆಗೆ ಇತ್ತು ಎಂದು ತಿಳಿಯಲಾಗಿದೆ. ಆದರೆ ಈಗಿನ ತುಳುನಾಡು ದಕ್ಷಿಣ ಕನ್ನಡ ಹಾಗೂ ಉಡುಪಿ (ಕುಂದಾಪುರ ತಾಲೂಕು ಬಿಟ್ಟು) ಜಿಲ್ಲೆಗಳಿಗೆ ಹಾಗೂ ಕೇರಳ ದಲ್ಲಿರುವ ಕಾಸರಗೋಡು ಜಿಲ್ಲೆಗೆ ಸೀಮಿತವಾಗಿದ್ದರೂ, ಮಹಾರಾಷ್ಟ್ರದ ಮುಂಬಯಿ ಹಾಗೂ ಥಾಣೆಗಳಲ್ಲಿ ಬಹಳಷ್ಟು ತುಳುವರು ಇದ್ದಾರೆ.
ಹಿಂದೆ ತುಳು ಬ್ರಾಹ್ಮಣರು ತುಳು ಭಾಷೆ ಬರೆಯಲು ತಿಗಳಾರಿ ಲಿಪಿಯನ್ನು ಉಪಯೋಗಿಸುತ್ತಿದ್ದರು. ಇದನ್ನೇ ತುಳು ಲಿಪಿ ಎಂದು ಪರಿಗಣಿಸಲಾಗಿದೆ. ಈ ಲಿಪಿಯನ್ನು ಸಂಸ್ಕೃತದ ಶ್ಲೋಕಗಳನ್ನು ಬರೆದಿಟ್ಟುಕೊಳ್ಳಲು ಉಪಯೋಗಿಸುತ್ತಿದ್ದರು. ತದನಂತರ, ತುಳುಲಿಪಿಯಲ್ಲಿ ಬರೆಯಲಾದ ಹಲವು ಗ್ರಂಥಗಳ ಹಸ್ತಪ್ರತಿಗಳು ಲಭಿಸಿವೆ. ಪ್ರಸ್ತುತವಾಗಿ ತುಳು ಬರೆಯಲು ವ್ಯಾಪಕವಾಗಿ ಕನ್ನಡ ಲಿಪಿಯನ್ನು ಬಳಸುತ್ತಾರೆ. ತುಳು ವಿಕಿಪೀಡಿಯಾ ಕೂಡಾ ಕನ್ನಡ ಲಿಪಿಯಲ್ಲಿದೆ.
ಕಳೆದ ಕೆಲವು ವರ್ಷಗಳಿಂದ ಕರ್ನಾಟಕ ರಾಜ್ಯದ ಶಾಲೆಗಳಲ್ಲಿ ತುಳು ಲಿಪಿಗಳನ್ನು ಕಲಿಸಲಾಗುತ್ತಿದ್ದು, ಕೆಲವು ಸಂಸ್ಥೆ ಸಂಘಟನೆಗಳು, ತುಳು ಲಿಪಿ ಕಲಿಸುವ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದೆ.
೧೯೭೧ನೇ ಇಸವಿಯಲ್ಲಿ ತುಳು ಸಿನಿಮಾಲೋಕ ಉದ್ಘಾಟನೆಯಾಗಿ ಮೊದಲ ತುಳು ಸಿನಿಮಾ ಎನ್ನ ತಂಗಡಿ ಬಿಡುಗಡೆಯಾಯಿತು. ಮುಂದೆ ತುಳುವಿನಲ್ಲಿ ಸುಮಾರು ೪೦ ಸಿನಿಮಾಗಳು ತಯಾರಾದವು.
ಬಿಡುಗಡೆ ಆಗದಿರುವ ಸಿನಿಮಾಗಳು ೪
ಯಕ್ಷಗಾನದಲ್ಲಿ ಭಾಷೆ,ಪ್ರಸಂಗ ಮತ್ತು ವೇಷಭೂಷಣಗಳಲ್ಲಿ ವೈಶಿಷ್ಟ್ಯತೆಗಳನ್ನು ಮೈಗೂಡಿಸಿಕೊಂಡಿರುವ ತುಳು ಯಕ್ಷಗಾನ ಪರಂಪರೆಯನ್ನು ವಿದ್ವಾಂಸರು "ತುಳುತಿಟ್ಟು" ಎಂದು ಗುರುತಿಸಿಕೊಂಡಿದ್ದಾರೆ. ಇದು ತೆಂಕುತಿಟ್ಟು ಯಕ್ಷಗಾನದ ಪ್ರಭೇದವಾಗಿ ವ್ಯವಸಾಯಿ ಮೇಳವಾಗಿ ಬೆಳೆದು ಬಂತು.ತುಳು ಯಕ್ಷಗಾನವು ತುಳುನಾಡಿನಲ್ಲಿ ಉಗಮವಾದರೂ,ಅದರ ಮಾಧ್ಯಮ ಕನ್ನಡವೇ ಆಗಿದ್ದಿತು. ಹಿಂದಿನ ದಿನಗಳಲ್ಲಿ ಕನ್ನಡ ಭಾಷೆಯೇ ಪ್ರಧಾನವಾಗಿದ್ದರಿಂದ ತುಳು ಭಾಷೆಯ ಪ್ರಸಂಗಗಳು-ಪ್ರದಶನಗಳು ವಿಫುಲವಾಗಿ ಕಂಡು ಬರುತ್ತದೆ.
೧೮೮೭ರಲ್ಲಿ ಬಾಯಾರು ಪೆರುವಡಿ ಸಂಕಯ್ಯ ಭಾಗವತರು ರಚಿಸಿದ "ಪಂಚವಟಿ-ವಾಲಿಸುಗ್ರೀವೆರೆ ಕಾಳಗೊ" ಎಂಬುದು ತುಳು ಭಾಷೆಯಲ್ಲಿ ದೊರಕಿದ ಮೊದಲ ಉಪಲಬ್ದ ಪ್ರಸಂಗ ಕೃತಿ. ಅನಂತರ ಮೂವತ್ತರ ದಶಕದಲ್ಲಿ "ಕೃಷ್ಣ ಸಂಧಾನ","ಅಂಗದ ಸಂಧಾನ"ಮೊದಲಾದ ಪ್ರಸಂಗ ಕೃತಿಗಳು ರಚನೆಯಾದವು. ೧೯೨೯ರಲ್ಲಿ ಪಂದಬೆಟ್ಟು ವೆಂಕಟರಾಯರು ಕೋಟಿ-ಚೆನ್ನಯ ಎಂಬ ಅವಳಿ ಪುಣ್ಯಪುರುಷರ ಸಾಹಸಗಾಧೆಯನ್ನು ತುಳು ಯಕ್ಷಗಾನ ಪ್ರಸಂಗಕ್ಕೆ ಅಳವಡಿಸಿದ ಮೊದಲ ಪ್ರಯತ್ನವಾಗಿದೆ. ಪ್ರಾರಂಭದ ದಿನಗಳಲ್ಲಿ ಕನ್ನಡ ಯಕ್ಷಗಾನಗಳು ಜನಪ್ರೀಯಗೊಂಡರೂ ತುಳುನಾಡಿನ ಜನತೆ ತುಳು ಭಾಷೆಯ ಯಕ್ಷಗಾನಕ್ಕೆ ಒಲವು ತೋರಿಸಿದ್ದರ ಪರಿಣಾಮವಾಗಿ ಜಾನಪದ,ಐತಿಹಾಸಿಕ,ಕಾಲ್ಪನಿಕ ಪ್ರಸಂಗಗಳ ಟೆಂಟ್ ಮೇಳಗಳು ಹುಟ್ಟಿಕೊಂಡವು.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.