Remove ads
ಕನ್ನಡ ಬರಹಗಾರ ಮತ್ತು ವಿಮರ್ಶಕ From Wikipedia, the free encyclopedia
ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು. ಇಂಗ್ಲೀಷ್ ಪ್ರಾಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅವರು ಅನಂತರ ಶಿಕ್ಷಣ ಸೇರಿದಂತೆ ಮುಂತಾದ ಕ್ಷೇತ್ರಗಳಲ್ಲಿ ಅನೇಕ ಮುಖ್ಯ ಹುದ್ದೆಗಳನ್ನು ನಿರ್ವಹಿಸಿದರು. ಅವರು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಜನಿಸಿದರು ಮತ್ತು ನವ ಚಳುವಳಿಯ ಪ್ರವರ್ತಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಇವರ ಸಮಗ್ರ ಸಾಹಿತ್ಯಕ್ಕಾಗಿ ೧೯೯೪ರಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದರು[೧] ,ಕನ್ನಡ ಭಾಷೆಗೆ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿರುವ ಆರನೇ ಬರಹಗಾರರಾಗಿದ್ದಾರೆ. ಈ ಪ್ರಶಸ್ತಿಯು ಭಾರತದಲ್ಲಿ ನೀಡಲ್ಪಟ್ಟ ಅತ್ಯುನ್ನತ ಗೌರವವಾಗಿದೆ. ೧೯೯೮ ರಲ್ಲಿ ಇವರು ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದರು. ೧೯೮೦ ರ ದಶಕದ ಅಂತ್ಯದಲ್ಲಿ ಕೇರಳದ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದರು. ಅವರು ೨೦೧೩ ರ ಮ್ಯಾನ್ ಬುಕರ್ ಅಂತರರಾಷ್ಟ್ರೀಯ ಪ್ರಶಸ್ತಿಯ ಅಂತಿಮ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು.
ಯು.ಆರ್. ಅನಂತಮೂರ್ತಿ | |
---|---|
ಜನನ | ಮೇಳಿಗೆ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ, ಮೈಸೂರು ಸಂಸ್ಥಾನ, ಭಾರತ | ೨೧ ಡಿಸೆಂಬರ್ ೧೯೩೨
ಮರಣ | 22 August 2014 81) ಬೆಂಗಳೂರು, ಕರ್ನಾಟಕ, ಭಾರತ | (aged
ವೃತ್ತಿ | ಪ್ರಾಧ್ಯಾಪಕರು, ಕನ್ನಡದ ಪ್ರಸಿದ್ಧ ಸಾಹಿತಿ |
ರಾಷ್ಟ್ರೀಯತೆ | ಭಾರತೀಯ |
ಪ್ರಕಾರ/ಶೈಲಿ | ಕವಿತೆ, ಕತೆ, ಕಾದಂಬರಿ, ಪ್ರಬಂಧ, ಸಾಹಿತ್ಯವಿಮರ್ಶೆ, ನಾಟಕ |
ಸಾಹಿತ್ಯ ಚಳುವಳಿ | ನವ್ಯ |
ಪ್ರಭಾವಗಳು |
ಅನಂತಮೂರ್ತಿಯವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ 'ಮೇಳಿಗೆ' ಹಳ್ಳಿಯಲ್ಲಿ, ೧೯೩೨ರ ಡಿಸೆಂಬರ್ ೨೧ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ, ತಾಯಿ ಸತ್ಯಮ್ಮ (ಸತ್ಯಭಾಮ).[೨]
'ದೂರ್ವಾಸಪುರ'ದ ಸಾಂಪ್ರದಾಯಿಕ ಸಂಸ್ಕೃತ ಪಾಠಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಆರಂಭಿಸಿದ ಅನಂತಮೂರ್ತಿಯವರ ಓದು ಅನಂತರ ತೀರ್ಥಹಳ್ಳಿ, ಮೈಸೂರುಗಳಲ್ಲಿ ಮುಂದುವರೆಯಿತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಎಂ.ಎ ಪದವಿ ಪಡೆದ ಇವರು ಹೆಚ್ಚಿನ ವ್ಯಾಸಂಗಕ್ಕಾಗಿ ಇಂಗ್ಲೆಂಡಿಗೆ ಹೋದರು. ಕಾಮನ್ವೆಲ್ತ್ ವಿದ್ಯಾರ್ಥಿ ವೇತನ ಪಡೆದ ಇವರು ಬರ್ಮಿಂಗ್ಹ್ಯಾಮ್ ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಮತ್ತು ತೌಲನಿಕ ಸಾಹಿತ್ಯ ಎಂಬ ವಿಷಯದಲ್ಲಿ ೧೯೬೬ರಲ್ಲಿ ಪಿಎಚ್.ಡಿ ಪದವಿ ಪಡೆದರು."ಋಜುವಾತು "ಪತ್ರಿಕೆಯನು ಪ್ರಾರಂಭಿಸಿದರು.
ಅನಂತಮೂರ್ತಿ ೧೯೭೦ ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಪ್ರಾಧ್ಯಾಪಕ ಮತ್ತು ಬೋಧಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ೧೯೮೭ ರಿಂದ ೧೯೯೧ ರವರೆಗೆ ಕೇರಳದ ಕೊಟ್ಟಾಯಂನಲ್ಲಿರುವ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದರು.[೩] ಅವರು ೧೯೯೨ ರವರೆಗೆ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.[೪] ೧೯೯೩ ರಲ್ಲಿ ಅವರು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ, ಟಬಿಂಗನ್ ವಿಶ್ವವಿದ್ಯಾಲಯ, ಅಯೋವಾ ವಿಶ್ವವಿದ್ಯಾಲಯ, ಟಫ್ಟ್ಸ್ ವಿಶ್ವವಿದ್ಯಾಲಯ ಮತ್ತು ಶಿವಾಜಿ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಭಾರತೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು.ಅನಂತಮೂರ್ತಿ ಎರಡು ಬಾರಿ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ೨೦೧೨ ರಲ್ಲಿ ಅವರನ್ನು ಕರ್ನಾಟಕದ ಕೇಂದ್ರ ವಿಶ್ವವಿದ್ಯಾಲಯದ ಮೊದಲ ಕುಲಪತಿಯನ್ನಾಗಿ ನೇಮಿಸಲಾಯಿತು.
ಅನಂತಮೂರ್ತಿ ದೇಶದಲ್ಲಿ ಮತ್ತು ಹೊರಗಡೆ ಹಲವಾರು ಸೆಮಿನಾರ್ಗಳಲ್ಲಿ ಬರಹಗಾರ ಮತ್ತು ವಾಗ್ಮಿಗಳಾಗಿ ಉಪನ್ಯಾಸಗಳನ್ನು ನೀಡಿದ್ದಾರೆ. ಅವರು ಭಾರತೀಯ ಬರಹಗಾರರ ಸಮಿತಿಯ ಸದಸ್ಯರಾಗಿದ್ದರು ಮತ್ತು ೧೯೯೦ ರಲ್ಲಿ ಸೋವಿಯತ್ ಒಕ್ಕೂಟ, ಹಂಗೇರಿ, ಫ್ರಾನ್ಸ್ ಮತ್ತು ಪಶ್ಚಿಮ ಜರ್ಮನಿಯಂತಹ ದೇಶಗಳಿಗೆ ಭೇಟಿ ನೀಡಿದರು. ಸೋವಿಯತ್ ಪತ್ರಿಕೆಯೊಂದರ ಮಂಡಳಿಯ ಸದಸ್ಯರಾಗಿ ೧೯೮೯ ರಲ್ಲಿ ಮಾಸ್ಕೋಗೆ ಭೇಟಿ ನೀಡಿದರು. ೧೯೯೩ ರಲ್ಲಿ ಚೀನಾಕ್ಕೆ ಭೇಟಿ ನೀಡಿದ ಬರಹಗಾರರ ಸಮಿತಿಯ ನಾಯಕ ಅನಂತಮೂರ್ತಿ.
ಡಾ.ಅನಂತ ಮೂರ್ತಿಯವರು ೨೦೦೨ರಿಂದ ಮೂತ್ರಪಿಂಡದ ಕಾಯಿಲೆಯಿಂದ ನರಳುತ್ತಿದ್ದರು. ಜೊತೆಗೆ ಸಕ್ಕರೆ ಕಾಯಿಲೆ ಕಾಡುತ್ತಿತ್ತು. ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ 'ಮಣಿಪಾಲ್ ಆಸ್ಪತ್ರೆ'ಯಲ್ಲಿ ೧೦ ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಹೊಂದದೆ ಮೂತ್ರಪಿಂಡ ವೈಫ಼ಲ್ಯ ಹಾಗು ಲಘು ಹೃದಯಾಘಾತದಿಂದ 2014ರ ಆಗಸ್ಟ್ 22ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಂಗಳೂರಿನ ಡಾಲರ್ ಕಾಲೊನಿಯಲ್ಲಿ ವಾಸಿಸುತ್ತಿದ್ದ ಮೂರ್ತಿಯವರ ಅಂತಿಮ ಸಂಸ್ಕಾರ, ಬೆಂಗಳೂರಿನ 'ಜ್ಞಾನಭಾರತಿ ಕಲಾಗ್ರಾಮ'ದಲ್ಲಿ2014ರ ಆಗಸ್ಟ್ 23 ನೆಯ ತಾರೀಖಿನ ಮಧ್ಯಾಹ್ನ ಸುಮಾರು ೪ ಗಂಟೆಗೆ ಜರುಗಿತು.[೭] ಮೂರ್ತಿಯವರು ಪತ್ನಿ ಎಸ್ತರ್, ಮಗ ಶರತ್ ಮತ್ತು ಮಗಳು ಅನುರಾಧರನ್ನು ಆಗಲಿದ್ದಾರೆ.[೮]
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.