ರೇಣುಕಾ ಜಲಾಶಯ
From Wikipedia, the free encyclopedia
From Wikipedia, the free encyclopedia
ಮಲಪ್ರಭಾ ನದಿಗೆ ಅಡ್ಡಲಾಗಿ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹತ್ತಿರ ನವಿಲುತೀರ್ಥ ದಲ್ಲಿ ಕಲ್ಲಿನ ಬಾಂಧಕಾಮಿನ ಆಣೆಕಟ್ಟು ಕಟ್ಟಲಾಗಿದೆ. ಈ ಆಣೆಕಟ್ಟು ೧೫೪.೫೩ ಮೀಟರ ಉದ್ದವಿದ್ದು ೪೦.೨೩ ಮೀಟರ ಎತ್ತರವಿದೆ. ಆಣೆಕಟ್ಟಿನ ಸಂಗ್ರಹ ಸಾಮರ್ಥ್ಯವು ೩೦.೨೬ ಘನ ಮೀಟರಗಳಿಷ್ಟಿದೆ. ಆಣೆಕಟ್ಟಿನ ಹಿನ್ನೀರಿನಲ್ಲಿ ೧೩,೫೭೮ ಹೆಕ್ಟೇರುಗಳಷ್ಟು ಪ್ರದೇಶವು ಮುಳುಗಡೆಯಾಗಿದೆ. ಈ ಜಲಾಶಯಕ್ಕೆ ರೇಣುಕಾ ಜಲಾಶಯವೆಂದು ಕರೆಯಲಾಗುತ್ತದೆ.
ಮಲಪ್ರಭಾ ಆಣೆಕಟ್ಟಿನ ಎಡದಂಡೆಯ ಕಾಲುವೆಯು ೧೫೦ ಕಿಮೀ ಉದ್ದವಿದ್ದು, ಇದರಿಂದ ೫೩,೧೩೬ ಹೆಕ್ಟೇರ್ ಜಮೀನಿಗೆ ನೀರಾವರಿಯಾಗುತ್ತದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ರೂವಾರಿಯಾದ ಇಂಜನಿಯರ ಎಸ್.ಜಿ.ಬಾಳೆಕುಂದ್ರಿಯವರ ಗೌರವಾರ್ಥ ಈ ಕಾಲುವೆಗೆ ಬಾಳೆಕುಂದ್ರಿ ಕಾಲುವೆ ಎಂದು ಹೆಸರಿಡಲಾಗಿದೆ. ಬಲದಂಡೆಯು ೧೪೨ ಕಿಮೀ ಉದ್ದವಿದ್ದು ೧,೩೯,೯೨೧ ಹೆಕ್ಟೇರ್ ಭೂಮಿಗೆ ನೀರುಣ್ಣಿಸುತ್ತದೆ. ರೇಣುಕಾ ಜಲಾಶಯ ದಿಂದ ಹುಬ್ಬಳ್ಳಿ ಹಾಗು ಧಾರವಾಡ ನಗರಗಳಿಗೆ ನೀರಿನ ಪೂರೈಕೆಯಾಗುತ್ತದೆ.
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.