ಆಯುರ್ವೇದ
From Wikipedia, the free encyclopedia
ಆಯುರ್ವೇದ (ಸಂಸ್ಕೃತ: आयुर्वेद ಆಯು—ಆಯಸ್ಸು; ವೇದ—ಜ್ಞಾನ) ೧೨೦೦೦ ವರ್ಷಗಳಿಗೂ ಹೆಚ್ಚು ಹಳೆಯದಾದ ಔಷಧ ಪದ್ಧತಿ. ವೇದಗಳಲ್ಲಿ ಮೂಡಿಬರುವ ಈ ಪದ್ಧತಿಯಲ್ಲಿ ಆರೋಗ್ಯ ಹಾಗೂ ದೀರ್ಘ ಆಯಸ್ಸನ್ನು ಹೇಗೆ ಪಡೆಯುವುದು ಎಂಬುದನ್ನು ಹೇಳುವುದೇ ಸಂಹಿತೆಗಳ ಮೂಲ ಉದ್ದೇಶ. ಹಿಂದೂ ಸಂಪ್ರದಾಯಕ್ಕೆ ಹೊಂದಿಕೊಂಡಂತಿರುವ ಈ ಪದ್ಧತಿ ಪ್ರಾಚೀನ ಭಾರತದಿಂದ (ಭಾರತೀಯ ಉಪಖಂಡ) ಬೆಳೆದು ಬಂದದ್ದು.[1][2] ಆಯುರ್ವೇದದಲ್ಲಿನ ಶಸ್ತ್ರಚಿಕಿತ್ಸೆಯ ಕ್ರಮಗಳನ್ನು ಇಂದು ಕೂಡ ಆಧುನಿಕ ವೈದ್ಯ ಪದ್ಧತಿಯು ಅನುಸರಿಸುತ್ತಿದೆ, ಉದಾಹರಣೆ ಛೇದನ-incision, ಭೇಧನ - excission, ಲೇಕನ- ಸ್ಕ್ರೇಪಿಂಗ್ ಹಾಗೂ ತಾಯಿಯ ಗರ್ಭದಲ್ಲಿ ಪ್ರತಿ ತಿಂಗಳ ಭ್ರೂಣ ಬೆಳವಣಿಗೆ, ರಚನೆ, ಪೋಷಕಾಂಶ ಪಾಲನೆ ವಿವರವಿದೆ. ಚರಕ ಸಂಹಿತೆ, ಸುಶ್ರುತ ಸಂಹಿತೆ ಇವೇ ಮೊದಲಾದ ಸಂಹಿತೆಗಳು ಶಸ್ತ್ರಚಿಕಿತ್ಸೆಯ ಬಗ್ಗೆ ಮಾಹಿತಿ ಒದಗಿಸುತ್ತವೆ.
ಆಯುರ್ವೇದ ಭಾರತದ ಪ್ರತಿ ಜನರಲ್ಲೂ ಪ್ರತಿಬಿಂಬಿಸುತ್ತದೆ ಹಾಗೂ ಎಲ್ಲಾ ಪ್ರಜೆಗಳು ಆಯುರ್ವೇದ ಚಿಕಿತ್ಸೆ ಪಡೆದು ಇವತ್ತಿಗೂ ಮುಂಚೂಣಿಯಲ್ಲಿ ಇದ್ದಾರೆ. ಇಂದಿಗೂ ಎಲ್ಲಾ ಭಾರತೀಯರು ಚರಕ ಸಂಹಿತೆ, ಸುಶ್ರುತ ಸಂಹಿತೆ ಪುಸ್ತಕವನ್ನು ಓದಿ ತಮ್ಮ ಜೀವನದಲ್ಲಿ ಲಾಭವನ್ನು ಪಡೆದಿದ್ದಾರೆ.