![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/a/a1/Sphere_1.jpg/640px-Sphere_1.jpg&w=640&q=50)
ಗೋಳ
From Wikipedia, the free encyclopedia
ಗೋಳ ಎಂದರೆ ಅರ್ಧವೃತ್ತವನ್ನು ಅದರ ವ್ಯಾಸದ ಸುತ್ತ ಪರಿಭ್ರಮಿಸಿದಾಗ ದೊರೆಯುವ ಆಕೃತಿ (sphere). ಪರ್ಯಾಯವಾಗಿ ಅಂತಸ್ಥ ಸ್ಥಿರಬಿಂದುವೊಂದರಿಂದ ಸ್ಥಿರ ದೂರದಲ್ಲಿರುವ ಸಕಲ ಬಿಂದುಗಳೂ ನೆಲೆಸಿರುವ ಮೇಲ್ಮೈ. ಚಿತ್ರ (1)ರಲ್ಲಿ ೦ ಸ್ಥಿರ ಬಿಂದು. OA=OB=OC=...=OH=r (ಸ್ಥಿರಾಂಕ) ಆಗಿರುವಂತೆ, ಮೂರು ಆಯಾಮಗಳಲ್ಲಿ A ಯಿಂದ F ವರೆಗಿನ ಕೆಲವು ಪ್ರರೂಪೀ ಬಿಂದುಗಳನ್ನು ಗುರುತಿಸಿದೆ. ಇಂಥ ಸಮಸ್ತ ಬಿಂದುಗಳೂ ನೆಲೆಸಿ ರಚಿಸುವ ಅವಿಚ್ಛಿನ್ನ ಸಂವೃತಾಕೃತಿಯೇ ಗೋಳ. ಸ್ಥಿರ ಬಿಂದುವಿನ (0) ಹೆಸರು ಕೇಂದ್ರ ; ಸ್ಥಿರ ದೂರದ (r) ಹೆಸರು ತ್ರಿಜ್ಯ.
![Thumb image](http://upload.wikimedia.org/wikipedia/commons/thumb/a/a1/Sphere_1.jpg/320px-Sphere_1.jpg)
ಒಂದು ಗೋಳ ಘನವಾಗಿರಬಹುದು (ಸಾಲಿಡ್) ಇಲ್ಲವೇ ಟೊಳ್ಳಾಗಿರಬಹುದು (ಹಾಲೋ). ಘನಗೋಳವನ್ನು ಅಸಂಖ್ಯಾತ ಏಕಕೇಂದ್ರಿಯ ಟೊಳ್ಳು ಗೋಳಗಳ ಸಂಕಲನ ಎಂದು ಭಾವಿಸುವ ಸಾಧ್ಯತೆ ಉಂಟು. ಟೊಳ್ಳುಗೋಳದ ಮೇಲ್ಮೈಯನ್ನು ತೆಗೆದರೆ ಉಳಿಯುವುದು ಕೇಂದ್ರ ಬಿಂದು ಮಾತ್ರ. r ತ್ರಿಜ್ಯವಿರುವ ಒಂದು ಗೋಳದ ಘನಗಾತ್ರ . ಅದರ ಮೇಲ್ಮೈಯ ಸಲೆ
. ಅನ್ಯಥಾ ಹೇಳದಿದ್ದರೆ ಇನ್ನು ಮುಂದಕ್ಕೆ ಗೋಳವೆಂದಾಗ ಘನಗೋಳವೆಂದು ಭಾವಿಸಬೇಕು.
![Thumb image](http://upload.wikimedia.org/wikipedia/commons/thumb/e/e8/Sphere_2.jpg/320px-Sphere_2.jpg)