![cover image](https://wikiwandv2-19431.kxcdn.com/_next/image?url=https://upload.wikimedia.org/wikipedia/commons/thumb/a/ad/Hksycss.jpg/640px-Hksycss.jpg&w=640&q=50)
ಜಾಗತೀಕರಣ
From Wikipedia, the free encyclopedia
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ.
![Thumb image](http://upload.wikimedia.org/wikipedia/commons/thumb/a/ad/Hksycss.jpg/320px-Hksycss.jpg)
ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.[1]. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.[2] ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.