ಮಾರ್ಕಂಡೇಯ
From Wikipedia, the free encyclopedia
ಭಾರ್ಗವ ಮಾರ್ಕಂಡೇಯ ನಮ್ಮ ಪುರಾಣಗಳಲ್ಲಿ ಬರುವ ಪ್ರಸಿದ್ಧ ಋಷಿಬಾಲಕ. ಪುರಾಣಗಳ ಪ್ರಕಾರ ಮಾರ್ಕಂಡೇಯನು ಮಹರ್ಷಿ ಭೃಗು ಮತ್ತು ಖ್ಯಾತಿ ದೇವಿ (ಧಕ್ಷ ಪ್ರಜಾಪತಿಯ ಮಗಳು) ಯರ ವಂಶದಲ್ಲಿ ಜನಿಸಿದವನು. ವಿವಿದ ಪುರಾಣಗಳಲ್ಲಿ ಸೂಚಿತವಾಗಿರುವಂತೆ ಈತ ಶಿವ ಮತ್ತು ವಿಷ್ಣುಭಕ್ತ. ಮಾರ್ಕಂಡೇಯ ಪುರಾಣವು ಮಾರ್ಕಂಡೇಯ ಮತ್ತು ಜೈಮಿನಿ ಎಂಬ ಮುನಿಯ ನಡುವೆ ನಡೆದ ಆಧ್ಯಾತ್ಮಿಕ ಸಂಭಾಷಣೆಗಳನ್ನು ಒಳಗೊಂಡಿದೆ. ಮಾರ್ಕಂಡೇಯನ ಹೆಸರು ಭಾಗವತ ಪುರಾಣದಲ್ಲಿ ವಿಶೇಷವಾಗಿ ಉಲ್ಲೇಖಿತಗೊಂಡಿದೆ. ಆತನ ಹೆಸರು ಮಹಾಭಾರತದಲ್ಲೂ ಕಂಡುಬರುತ್ತದೆ.
Quick Facts ಮಾರ್ಕಂಡೇಯ ರಾಜಾ ರವಿ ವರ್ಮ ಅವರ ಚಿತ್ರಣದಲ್ಲಿ ಮಾರ್ಕಂಡೇಯನನ್ನು ಯಮನಿಂದ ರಕ್ಷಿಸುತ್ತಿರುವ ಶಿವ ...
ಮಾರ್ಕಂಡೇಯ
|
---|
Close
ಮಾರ್ಕಂಡೇಯ ಮುನಿಯು ಮಾರ್ಕಂಡೇಯ ಪುರಾಣವನ್ನು ರಚಿಸಿದ ಸ್ಥಳವೆಂದು ಪ್ರತೀತಿ ಹೊಂದಿರುವ ಮಾರ್ಕಂಡೇಯ ತೀರ್ಥವು ಉತ್ತರಕಾಂಡ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿರುವ ಯಮುನೋತ್ರಿಗೆ ಚಾರಣಿಗರು ಪಯಣಿಸುವ ಹಾದಿಯಲ್ಲಿದೆ.