ರಕ್ಷಾ ಬಂಧನ
ಭಾರತದಲ್ಲಿ ಆಚರಿಸಲ್ಪಡುವ ಹಬ್ಬ / From Wikipedia, the free encyclopedia
ಅಣ್ಣ ತಂಗಿಯ ಜೀವನದ ಒಂದು ಉತ್ತಮ ಪ್ರೀತಿಯ ಸಂಕೇತ ಒಬ್ಬರನ್ನು ಪರಸ್ಪರ ರಕ್ಷಣೆ ಮಾಡುವ ಮನಸ್ತಾಪವನ್ನು ಹೊಂದಿರುತ್ತಾರೆ. ರಕ್ಷಾ ಬಂಧನ ಪ್ರಾಚೀನ ಕಾಲದಿಂದ ಬಹಳ ಪ್ರಾಮುಖ್ಯತೆ ಹೊಂದಿದೆ
Quick Facts Raksha.Bandhan ರಕ್ಷಾ ಬಂಧನ, ಅಧಿಕೃತ ಹೆಸರು ...
Close
ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.[1]
- ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ 'ರಕ್ಷಾಬಂಧನ' ಅಥವಾ 'ರಾಖಿ' ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.
- ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ