ಕರ್ನಾಟಕ ರಾಜ್ಯದ ಒಂದು ಜಿಲ್ಲೆ From Wikipedia, the free encyclopedia
ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ (ಸಂಪರ್ಕ : ೧೩.೫೬ ಉ /೭೫.೩೮ ಪೂ). ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೬೬ ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ.
ಶಿವಮೊಗ್ಗ | |
ರಾಜ್ಯ - ಜಿಲ್ಲೆ |
[[ಕರ್ನಾಟಕ]] - ಶಿವಮೊಗ್ಗ |
ನಿರ್ದೇಶಾಂಕಗಳು | |
ವಿಸ್ತಾರ | 50 km² |
ಸಮಯ ವಲಯ | IST (UTC+5:30) |
ಜನಸಂಖ್ಯೆ (2001) - ಸಾಂದ್ರತೆ |
- /ಚದರ ಕಿ.ಮಿ. |
ನಗರಸಭೆ ಉಪಾಧ್ಯಕ್ಷರು | ಮಂಗಳಾ ಅಣ್ಣಪ್ಪ |
ಕೋಡ್ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 577 201-೪ - +91-(0)8182 - ಶಿವಮೊಗ್ಗ KA-14, ಸಾಗರ KA-15 |
ಅಂತರ್ಜಾಲ ತಾಣ: [http://www |
ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿ-ಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತಂದುಕೊಟ್ಟಿವೆ. ಶಿವಮೊಗ್ಗದಿಂದ ೧೧೩ ಕಿಮೀ ದೂರದಲ್ಲಿರುವ ಜಗತ್ಪ್ರಸಿದ್ಧ ಜೋಗದ ಜಲಪಾತ ಪ್ರಕೃತಿಯ ಒಂದು ಅಪೂರ್ವ ದೃಶ್ಯ. ಇಲ್ಲಿ ಶರಾವತಿ ನದಿ ೨೩೫ ಮೀ ಎತ್ತರದಿಂದ ಸುಮನೋಹರವಾಗಿ ಧುಮುಕುತ್ತದೆ. ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ವಿಭಿನ್ನ ಪ್ರವಾಹಗಳಾಗಿ ಧುಮುಕುವ ಶರಾವತಿ ಏಷ್ಯದ ಅತಿ ಎತ್ತರದ ಜಲಪಾತವನ್ನು ನಿರ್ಮಿಸಿದೆ. ಮಳೆಗಾಲದ ಸಮಯದಲ್ಲಿ ಕಾಮನ ಬಿಲ್ಲುಗಳನ್ನು ನಿರ್ಮಿಸಿಕೊಂಡು ಅತ್ಯದ್ಭುತ ದೃಶ್ಯವನ್ನು ಜಲಪಾತ ಪ್ರದರ್ಶಿಸುತ್ತದೆ. ತುಂಗಭದ್ರಾ, ಶರಾವತಿ, ಕುಮುದ್ವತಿ ಮತ್ತು ಇತರ ನದಿಗಳಿಂದ ಜಲಸರಬರಾಜಿನ ಸೌಕರ್ಯವುಳ್ಳ ಶಿವಮೊಗ್ಗ ಜಿಲ್ಲೆ ಕರ್ನಾಟಕದ ಅನ್ನದ ಬಟ್ಟಲು ಎನ್ನಿಸಿಕೊಂಡಿದೆ[ಸೂಕ್ತ ಉಲ್ಲೇಖನ ಬೇಕು].
ಶಿವಮೊಗ್ಗ ಎಂಬ ಹೆಸರು 'ಶಿವ-ಮುಖ' ಎಂಬ ಪದಪುಂಜದಿಂದ ಬಂದದ್ದು. ಇನ್ನೊಂದು ವ್ಯುತ್ಪತ್ತಿಯಂತೆ ಇದು 'ಸಿಹಿ-ಮೊಗೆ' (ಸಿಹಿಯಾದ ಮೊಗ್ಗು) ಎಂದಿದ್ದು ಅದು 'ಶಿವಮೊಗ್ಗ'ವಾಗಿ ಮಾರ್ಪಾಟುಹೊಂದಿದೆ.ಈ ಪ್ರದೇಶವು ಕ್ರಿ.ಪೂ. ೩ನೇ ಶತಮಾನದಲ್ಲಿ ಸಾಮ್ರಾಟ್ ಅಶೋಕನ ಮೌರ್ಯ ಸಾಮ್ರಾಜ್ಯದ ದಕ್ಷಿಣದ ತುದಿಯಾಗಿದ್ದಿತು. ಮುಂದಿನ ಶತಮಾನಗಳಲ್ಲಿ ಅನೇಕ ರಾಜಮನೆತನಗಳ ಆಳ್ವಿಕೆಯಲ್ಲಿ ಈ ಪ್ರದೇಶ ಇದ್ದಿತು: ೪ನೇ ಶತಮಾನದಲ್ಲಿ ಕದಂಬರು, ೬ನೇ ಶತಮಾನದಲ್ಲಿ ಚಾಲುಕ್ಯರು ಮತ್ತು ಅವರ ಸಾಮಂತರಾದ ಗಂಗರು, ೮ನೇ ಶತಮಾನದಲ್ಲಿ ರಾಷ್ಟ್ರಕೂಟರು, ೧೧ನೇಯದರಲ್ಲಿ ಹೊಯ್ಸಳರು ಮತ್ತು ೧೫ನೇ ಶತಮಾನದಲ್ಲಿ ವಿಜಯನಗರದ ಅರಸರು ಈ ಪ್ರದೇಶವನ್ನು ಆಳಿದೆ ರಾಜಮನೆತನಗಳಲ್ಲಿ ಪ್ರಮುಖರು. ಶಿವಮೊಗ್ಗ ನಗರಕ್ಕೆ ಸ್ವತಂತ್ರ ವ್ಯಕ್ತಿತ್ವ ಬಂದದ್ದು ೧೬ನೇ ಶತಮಾನದ ಕೆಳದಿ ನಾಯಕರ ಆಳ್ವಿಕೆಯಲ್ಲಿ. ೧೭ನೇ ಶತಮಾನದ ನಂತರ ಭಾರತ ಸ್ವಾತಂತ್ರ್ಯದ ವರೆಗೂ ಶಿವಮೊಗ್ಗ ಮೈಸೂರು ಸಂಸ್ಥಾನದ ಭಾಗವಾಗಿತ್ತು.
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ೨೦೧೧ರಲ್ಲಿ ಪ್ರಾರಂಭವಾಯಿತು. ಗುತ್ತಿಗೆದಾರರು ಮತ್ತು ಪಾಲುದಾರರ ಜೊತೆ ಅಭಿಪ್ರಾಯಭೇದ ತಲೆದೋರಿ ಕೆಲಸವು ೨೦೧೫ರಲ್ಲಿ ನಿಂತುಹೋಯಿತು. ೨೦೨೦ರಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಕಾಮಗಾರಿ ಆರಂಭಕ್ಕೆ ಅನುಮೋದನೆ ನೀಡಿದರು[1]. ೨೮ ಫೆಬ್ರವರಿ ೨೦೨೩ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಂಡಿತು.[2]
ಕುವೆಂಪು ವಿಶ್ವವಿದ್ಯಾನಿಲಯವು ಶಿವಮೊಗ್ಗದಿ೦ದ ೨೭ ಕಿ.ಮಿ, ಶಿವಮೊಗ್ಗದಿಂದ ಭದ್ರಾ ಅಣೆಕಟ್ಟೈಗೆ (ಬಿ.ಆರ್.ಪಿ) ಗೆ ಹೋಗುವ ಮಾರ್ಗದಲ್ಲಿ ಶಂಕರ ಘಟ್ಟ ದಲ್ಲಿದೆ. ಶಿವಮೊಗ್ಗ ಜಿಲ್ಲೆಯ ಪ್ರಸಿಧ್ಹ ಸಾಹಿತಿ ಕೆ. ವಿ. ಪುಟ್ಟಪ್ಪ (ಕುವೆಂಪು) ರವರ ಸ್ಮರಣಾರ್ಥ್ಹ ವಾಗಿ ಈ ವಿಶ್ವ ವಿದ್ಯಾನಿಲಯಕ್ಕೆ ಅವರ ಹೆಸರನ್ನು ಇಡಲಾಗಿದೆ.
೨೦೧೧ರ ಜನಗಣತಿಯ ಪ್ರಕಾರ ಶಿವಮೊಗ್ಗ ಜಿಲ್ಲಾ ಜನಸಂಖ್ಯಾ ವಿವರ [3]
ತಾಲ್ಲೂಕು | ಸಾಕ್ಷರತೆ ಪ್ರಮಾಣ (%) | ಜನಸಂಖ್ಯೆ ೨೦೧೧ರ ಜನಗಣತಿ ಪ್ರಕಾರ |
ಪುರುಷರು | ಮಹಿಳೆಯರು/ (ಪ್ರತಿ ೧೦೦೦ ಪುರುಷರಿಗೆ ಮಹಿಳೆಯರ ಪ್ರಮಾಣ) ರ2001 ರ ಗಣತಿ |
ಜನಸಂಖ್ಯೆ ೨೦೦೧ರ ಜನಗಣತಿ ಪ್ರಕಾರ |
---|---|---|---|---|---|
ಶಿವಮೊಗ್ಗ ಜಿಲ್ಲೆ | 74.89 | 17,55,512 | 8,79,817 | 8,75,695/995 | ಲಭ್ಯವಿಲ್ಲ |
ಶಿವಮೊಗ್ಗ ತಾಲ್ಲೂಕು | 77 | 5,07,083 | 2,55,317 | 251761/969 | 4,45,192 |
ಭದ್ರಾವತಿ ತಾಲ್ಲೂಕು | 77 | 3,39,930 | 1,70,291. | 1,69,636/997 | 3,38,989 |
ಭದ್ರಾವತಿ ನಗರ | -- | 1,50,776 | ಲಭ್ಯವಿಲ್ಲ | ಲಭ್ಯವಿಲ್ಲ | 1,60,662 |
ತೀರ್ಥಹಳ್ಳಿ | 83.05 | 1,41,453 | 69,593 | 71,869/1038 | 1,43,207 |
ಶಿವಮೊಗ್ಗ ಗ್ರಾಮೀಣ | -- | 1,26,916 | ಲಭ್ಯವಿಲ್ಲ | ಲಭ್ಯವಿಲ್ಲ | 1,28,399 |
ಸಾಗರ | 81.00 | 2,06,112 | 1,02,276 | 1,03,834/1012 | 2,00,995 |
ಹೊಸನಗರ | 81.5 | 1,18,148 | 58,503 | 59,645/1037 | 1,15,000 |
ಶಿಕಾರಿಪುರ | 76.5 | 2,41,943 | 1,22,527 1, | 19,413/980 | 2,13,590 |
ಸೊರಬ | 77 | 2,00,843 | 1,01,297 | 91,546/999 | 1,85,572
|
Seamless Wikipedia browsing. On steroids.
Every time you click a link to Wikipedia, Wiktionary or Wikiquote in your browser's search results, it will show the modern Wikiwand interface.
Wikiwand extension is a five stars, simple, with minimum permission required to keep your browsing private, safe and transparent.